ಮುಕ್ತಿರೂಪ ಅಯ್ಯಪ್ಪ
ಪರಬ್ರಹ್ಮ ತತ್ವ ಸಾಕ್ಷಾತ್ಕಾರದ ಬೆಳಕು ನೀಡೋ ಲೌಕಿಕದ ಮೋಹ ಕಳೆವ ಗುರುವೇ ಅಯ್ಯಪ್ಪ ||ಪ|| ಶ್ರೀಹರಿಯು ಚೆಂದದಲಿ ಮೋಹಿನಿಯಾಗೆ ಮದನಾಂತಕ ಹರನು ಮೋಹಿತನಾಗಿ ಯೋಗಶಕ್ತಿಗಳೆರಡು ಕೂಡಿ ಒಂದಾಗಿ ರೂಪ ತಳೆದ ಮಹಾಶಕ್ತಿ ಸ್ವಾಮಿ ಅಯ್ಯಪ್ಪ ||೧|| ಯೋಗದಲಿ ಯೋಗಿ ಯೋಗೇಶ್ವರನು ಯೋಗನಿದಿರೆಯಲಿ ಹರಿ ಯೋಗಮಾಯೆ ಯೋಗ ಯೋಗಗಳು ಯೋಗದಲಿ ಏಕವಾಗೆ ಜನಿಸಿದ ಮಹಾಯೋಗಿಯೇ ಸ್ವಾಮಿ ಅಯ್ಯಪ್ಪ ||೨|| ಸರ್ವಗುಣಸಂಪನ್ನ ಭಾವುಕನು ಹರಿಯು ತಪೋನಿರತ ಭಾವಾತೀತನೂ ಹರನು ಭಾವ ಗುಣಗಳೆಲ್ಲವು ತಪದಲೊಂದಾಗಿ ಗುಣಭಾವದಾಚೆಯ ಪರತತ್ವ ನೀನೇ ಅಯ್ಯಪ್ಪ ||೩|| ಗುಣಾವಗುಣಗಳೆಲ್ಲವ ಮನದೊಳಿಟ್ಚು ಮನುಜಕುಲ ತಾ ನಿರ್ಭಾವುಕತೆಯ ಬಿಟ್ಟು ತಾನೆಂಬ ಅಹಂಭಾವದೊಳು ಬೀಗಿರಲು ಕಣ್ತೆರೆದು ಅರಿವ ಬೆಳಕು ಮೂಡಿಸೋ ಅಯ್ಯಪ್ಪ ||೪|| ಭೂಮಿ ಭೂಮಿಯನೆ ಸೆಳೆದು ಕೂಡಿ ತುಂಡು ಇಳೆಗೆ ಬಂಧ ಮುರಿದು ಕಾಡಿ ಸೌಧ ಕಟ್ಟಿ ಬಂಧಿಯಾಗಿಕೊಂಬ ಜನಕೆ ಭೂಮಿ ಉಸಿರ ನಂಟು ಕಾಣಿಸೋ ಅಯ್ಯಪ್ಪ ||೫|| ಬೆಳ್ಳಿ ಬಂಗಾರ ವೈಢೂರ್ಯ ರಾಶಿ ಸಂಪದವ ಶೇಖರಿಪ ಮನದ ಖುಷಿ ಮರುಳು ಚಿತ್ತದಲಿ ಅರಿವು ಮೂಡಿಸೋ ಬಕುತಿ ಸಂಪದ ಅನಂತವದು ಅಯ್ಯಪ್ಪ ||೬|| ಮೋಹ ಮೋಹವೆಲ್ಲ ಕ್ಷಣಿಕವೋ ಬಂಧ ಸಂಬಂಧವೆಲ್ಲ ಮರುಳೋ ಮೋಹ ಬಂಧದ ಮರುಳ ಕಳೆದು ಮನುಜ ಮನಕೆ ಬೆಳಕಾಗೋ ಅಯ್ಯಪ್ಪ ||೭|| ಬಂಧ ಮೋಹ ಪಾಶ ಕಳೆದು ಇಹದ ವಾಂಛೆಗಳೆಲ್ಲ ಅಳಿದು ಶರಣು ಶರಣೆನುತಲಿ ಪದಕೆರಗೆ ಕೈಲಾಸ ವೈಕುಂಠಕೆ ಒಯ್ಯೋ ಅಯ್ಯಪ್ಪ ||೮|| ಹರಿಹರ ಸುತ ಮಹಾಶಾಸ್ತ್ರನೇ ...