Posts

Showing posts with the label kannada

ವಿಜ್ಞಾನವೆಂದರೆ ನಮಗೇಕೆ ಅಲರ್ಜಿ?

Image
ಸಾಮಾನ್ಯ ಗಾರೆ ಕೆಲಸದ ಮೇಸ್ತ್ರಿಗೆ ಕಾಲೇಜಿನಲ್ಲಿ ಕಲಿತು ಡಿಗ್ರಿ ಪಡೆದುಕೊಂಡವರಿಗಿಂತ ಚೆನ್ನಾಗಿ ಗಣಿತ ಗೊತ್ತಿರುತ್ತದೆ. ಆದರೆ ಓದು, ಬರೆಹ ಅಂದರೆ ಜನ ಹಿಂದೆ ಸರಿಯುತ್ತಿರುವುದೇಕೆ? ಪತ್ರಿಕೆಗಳು, ಶಿಕ್ಷಣ ವ್ಯವಸ್ಥೆ ವಿಜ್ಞಾನ, ತಂತ್ರಜ್ಞಾನ ಮತ್ತು ಗಣಿತವನ್ನು ಕಬ್ಬಿಣದ ಕಡಲೆ ಎಂದು ಬಿಂಬಿಸಿದ್ದರ ಪಡಿಣಾಮ ಇದು. ಇಂಥ ಭ್ರಮೆಯನ್ನು ಹೋಗಲಾಡಿಸಲು ಮರಾಠಿಯ ಮಾಸಿಕ `ಸೃಷ್ಟಿಜ್ಞಾನ'ದ ಸಾಧನೆಯನ್ನು ವಿವರಿಸಿ ಹೇಳಬೇಕು...  ವಿಜ್ಞಾನ, ಗಣಿತ ಎಂದರೆ ಸಾಕು ಮಾರು ದೂರ ಹೋಗುತ್ತೇವೆ. ಅಷ್ಟಿದ್ದರೂ ಕೂಡ ಕಬ್ಬಿಣದ ಕಡಲೆ ಎಂದೇ ಪರಿಗಣಿತವಾದ ವಿಜ್ಞಾನ ಮತ್ತು ಗಣಿತವನ್ನು ನಿತ್ಯ ಜೀವನದಲ್ಲಿ ಅರಿವಿಲ್ಲದೆಯೇ ಬಳಸಿಕೊಳ್ಳುತ್ತೇವೆ. ಸಾಮಾನ್ಯ ಗಾರೆ ಕೆಲಸದ ಮೇಸ್ತ್ರಿಗೆ ಕಾಲೇಜಿನಲ್ಲಿ ಕಲಿತು ಡಿಗ್ರಿ ಪಡೆದುಕೊಂಡವರಿಗಿಂತ ಚೆನ್ನಾಗಿ ಗಣಿತ ಗೊತ್ತಿರುತ್ತದೆ. ಇದು ವಾಸ್ತವ ಆದರೆ ಎಷ್ಟೇ ಚೆನ್ನಾಗಿ ಲೆಕ್ಕಗಳನ್ನು ಮಾಡಲು ಗೊತ್ತಿದ್ದರೂ, ವಿಜ್ಞಾನದ ವಿಚಾರಗಳ ಬಗ್ಗೆಯೇ ನಿರರ್ಗಳವಾಗಿ ಮಾತಾಡುವುದಕ್ಕೆ ಸಾಧ್ಯವಿದ್ದರೂ ವಿಜ್ಞಾನದ ಓದು, ಬರೆಹ ಅಂದರೆ ಜನ ಹಿಂದೆ ಸರಿಯುತ್ತಿರುವುದೇಕೆ? ಪತ್ರಿಕೆಗಳು, ಶಿಕ್ಷಣ ವ್ಯವಸ್ಥೆ ವಿಜ್ಞಾನ, ತಂತ್ರಜ್ಞಾನ ಮತ್ತು ಗಣಿತವನ್ನು ಕಬ್ಬಿಣದ ಕಡಲೆ ಎಂದು ಬಿಂಬಿಸಿದ್ದರ ಪಡಿಣಾಮ ಇದು. ಎಷ್ಟೋ ಪತ್ರಿಕೆಗಳನ್ನು, ಪತ್ರಕರ್ತರನ್ನು ವಿಜ್ಞಾನ, ತಂತ್ರಜ್ಞಾನ ಮತ್ತು ಗಣಿತದ ಬಗ್ಗೆ ಕೇಳಿ ನೋಡಿ- `ಅದೆಲ್ಲಾ ಯಾರಿಗೆ ಅರ್ಥವಾ...